ಬೆಂಗಳೂರು: ಆದಾಯ ಮೀರಿದ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಆರು ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ( ಜನವರಿ 9) ಬೆಳಗ್ಗೆಯೇ ದಾಳಿ ನಡೆಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ಆರು ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್ ಎನ್. ಸತೀಶ್ ಬಾಬು, ಕುಂದಾಣ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಿ.ಎಂ. ಪದ್ಮನಾಭ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮುನೀರ್, ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಮಂಜೇಶ್ ಬಿ.ಹಾಗೂ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ಸುರೇಶ್ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





