Breaking News

ಕಾಂಗ್ರೆಸ್‌ನ ಮಹಿಳಾ ನಾಯಕಿಯೊಬ್ಬರು ಚಾಮರಾಜನಗರ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ….

ಚಾಮರಾಜನಗರ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್‌ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ.

ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. ಆದರೆ ಅವರು ಸಹ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಬಿಜೆಪಿ ಸಹ ಅಭ್ಯರ್ಥಿ ಹುಡುಕುವುದು ಅನಿವಾರ್ಯವಾಗಿದೆ.

ಕಾಂಗ್ರೆಸ್‌ನ ಮಹಿಳಾ ನಾಯಕಿಯೊಬ್ಬರು ಚಾಮರಾಜನಗರ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ನಾಯಕ ಆರ್. ಧ್ರುವ ನಾರಾಯಣ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014ರ ಚುನಾವಣೆಯಲ್ಲಿ ಸಂಸದರಾಗಿಯೂ ಆಯ್ಕೆಯಾಗಿದ್ದರು. ಆದರೆ 2019ರಲ್ಲಿ ಸೋಲು ಕಂಡಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *