Breaking News

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ…

ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ ಈಗಾಗಗಲೇ ಸಾಕಷ್ಟು ನಟರಿಗೆ ಆಹ್ವಾನ ಸಿಕ್ಕಿದೆ ಅನ್ನೋ ಸುದ್ದಿ ಕೇಳಿ ಬರುತ್ತಿದೆ. ಬುಧವಾರ ಜಾಗ್ವಾರ್ ನಟ ನಿಖಿಲ್ ಕುಮಾರ್ ಅವರಿಗೆ ರಾಮ ಲಲ್ಲನ ಪ್ರಾಣ ಪ್ರತಿಷ್ಠಾನಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ.
ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ ಬಂದಿದೆ. ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿಯಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *