Breaking News

ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಲಂಚ ಕೊಡುವಂತೆ ಕೇಳುತ್ತಿದ್ದಾರೆ….

ಧಾರವಾಡ: ಕರ್ನಾಟಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿ ಬಂದಿದ್ದ ಗುತ್ತಿಗೆದಾರರ ಆರೋಪಗಳು ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿವೆ. ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಅವರು ಧಾರವಾಡ ಪಾಲಿಕೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಬಿಲ್ ಕೇಳಲು ಹೋದರೆ ಮೊದಲು ಲಂಚ ಕೊಡುವಂತೆ ಮಹಾನಗರ ಪಾಲಿಕೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಳುತ್ತಿದ್ದಾರೆ ಎಂದು ಅವರು ಬುಧವಾರ ಆಪಾದಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಧಾರವಾಡ ಪಾಲಿಕೆಯಲ್ಲಿ ಟೆಂಡರ್ ಕರೆದ ಬಿಲ್ ಕೊಡಲು ಹಣ ಕೊಟ್ಟರೆ ಮಾತ್ರ ಬಿಲ್ ಬರೆಯಲಾಗುತ್ತಿದೆ. ಈ ಸಂಬಂಧ ನಮ್ಮ ಗುತ್ತಿಗೆದಾರರಿಂದ ಸಾಕಷ್ಟು ದೂರು ಬಂದಿವೆ. ಇದನ್ನು ನಿಯಂತ್ರಣಕ್ಕೆ ತರಬೇಕಿದೆ. ಪಾಲಿಕೆ ಆಯುಕ್ತರಿಗೆ ಈ ಸಂಬಂಧ ಮನವಿ ಕೊಡಲಾಗುವುದು. ಇದನ್ನು ಇಲ್ಲೇ ನಿಯಂತ್ರಣ ಮಾಡಿದರೆ ಸರಿ. ಇಲ್ಲವಾದರೆ ಸರ್ಕಾರಕ್ಕೆ ಹಾಗೂ ಲೋಕಾಯುಕ್ತಕ್ಕೆ ಕೂಡ ದೂರು ನೀಡಲಾಗುವುದು ಎಂದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *