Breaking News

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿ ಇಂಧನ ಬೆಲೆಯನ್ನು ಪ್ರದರ್ಶಿಸಲು ಪ್ರಾರಂಭಿಸಲಿವೆ: ಹರ್ದೀಪ್ ಸಿಂಗ್ ಪುರಿ.

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿ ಇಂಧನ ಬೆಲೆಯನ್ನು ಪ್ರದರ್ಶಿಸಲು ಪ್ರಾರಂಭಿಸಲಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ನಾನು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸುತ್ತಿದ್ದಾಗ ಬೆಲೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪ್ರದರ್ಶಿಸಲಾಗುತ್ತದೆ ಎಂದು ಸ್ನೇಹಿತರೊಬ್ಬರು ಸೂಚಿಸಿದರು. ಕೂಡಲೇ ತೈಲ ಕಂಪನಿಗಳಿಗೆ ಬೆಲೆಗಳನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡುವಂತೆ ನನ್ನ ಸಚಿವಾಲದ ಸಿಬ್ಬಂದಿಗೆ ಸೂಚಿಸಿದೆ. ಬುಧವಾರದಿಂದ ಇದು ಆರಂಭವಾಗಲಿದೆ ಎಂದು ಪುರಿ ಹೇಳಿದರು.

ಕಳೆದ ಎರಡು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕುಸಿದಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ. ಪ್ರತಿ ಸಭೆಯಲ್ಲೂ ನಾನು ಅವುಗಳನ್ನು ಬಹಿರಂಗಪಡಿಸುತ್ತಿರುವುದರಿಂದ ಅವರು (ಪ್ರತಿಪಕ್ಷಗಳು) ಪೆಟ್ರೋಲ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ ಎಂದು ಪುರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *