ಶಿವಮೊಗ್ಗ: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಹೈಕಮಾಂಡ್ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು, ಆದರೆ, ಇದೀಗ ಆಯೋಧ್ಯೆಗೆ ಭೇಟಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದ ಸಿದ್ದರಾಮಯ್ಯ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದರು.
ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





