ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬಂದಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಈದು ಚುನಾವಣಾ ತಂತ್ರ ಅಲ್ಲ. ರಾಜ್ಯ ಸಭೆ ಚುನಾವಣೆ ವೇಳೆ ಯಾರಿಗೆ ನಾವು ಅವಕಾಶ ಕೊಡುತ್ತೇವೆ ಎಂದಿದ್ದೆವೋ ಅವ್ರಿಗೆಲ್ಲ ಕೊಟ್ಟೆವು ಅಷ್ಟೇ ಮತ್ತೇನು ಇಲ್ಲ ಎಂದು ಡಿಕೆಶಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





