Breaking News

ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ? ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.
ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ ಈ ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ. ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌ ವಿರುದ್ಧ ಕ್ರಮ ಕೈಗೊಳ್ಳಿ. ಆ ಸ್ಥಾನದಿಂದ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಕಾಂತಕುಮಾರ್‌ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *