ಬೆಂಗಳೂರು: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದು ಹೇಳಿದರು.
ದೇಶವನ್ನು, ಸಾಮಾನ್ಯ ಜನರನ್ನು ರಕ್ಷಿಸುವ ನೀವು ಅಪರಾಧಗಳಿಗೆ ಸಹಾಯ ಮಾಡಿದರೆ ಕಾನೂನು ಪಾಲಿಸುವರು ಯಾರು….? ಒಳ್ಳೆಯ ಸಮಾಜಕ್ಕೆ ಒಳ್ಳೆಯ ಕರ್ತವ್ಯ ನಿರ್ವಹಿಸುವ ಪೊಲೀಸರು ಬೇಕು ಅದು ನಿವಾಗಬೇಕು ಎಂದೂ ಸಿದ್ದರಾಮಯ್ಯ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





