Breaking News

ರಾಜ್ಯ ಸರ್ಕಾರದಿಂದ ʻಗೃಹಜ್ಯೋತಿʼ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್..

ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ 10 ಯೂನಿಟ್‌ ವಿದ್ಯುತ್‌ ನೀಡುವ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ…ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್‌ ಪಾವತಿ ಮಾಡುವಂತೆ ಸರ್ಕಾರ ಆದೇಶ ನೀಡಿತ್ತು.ವಾರ್ಷಿಕ ವಿದ್ಯುತ್‌ ಬಳಕೆ ಆಧರಿಸಿ ಶೇ. 10 ರಷ್ಟು ಹೆಚ್ಚುವರಿ ವಿದ್ಯುತ್‌ ನೀಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಇದೀಗ 10% ಬದಲಾಗಿ 10 ಯೂನಿಟ್‌ ಹೆಚ್ಚುವರಿ ವಿದ್ಯುತ್‌ ನೀಡಲು ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *