Breaking News

ಅಯೋಧ್ಯೆ ರಾಮಮಂದಿರಕ್ಕೆ ನಟ ಪ್ರಭಾಸ್ 50 ಕೋಟಿ ರೂ. ದೇಣಿಗೆ..?

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ಇದೇ ತಿಂಗಳ 22ಕ್ಕೆ ಸಮೀಪಿಸುತ್ತಿದ್ದಂತೆ ಕೋಟ್ಯಂತರ ಭಾರತೀಯರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿದ್ದಾರೆ. ರಾಮಮಂದಿರ ತೆರೆಯುವ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಸುಮಾರು 300 ಸ್ಥಳಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗುತ್ತಿದೆ. ದೇವಾಲಯ ತೆರೆಯುವ ದಿನದಂದು ಪ್ರಭಾಸ್ ದೇಣಿಗೆ ನೀಡಲಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಅಯೋಧ್ಯೆ ಪ್ರತಿಷ್ಠಾ ದಿನದಂದು ಆಹಾರದ ವೆಚ್ಚ ಬರೋಬ್ಬರಿ 50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಪ್ರಭಾಸ್ ಸಂಪೂರ್ಣ ವೆಚ್ಚವನ್ನು ಭರಿಸಲು ನಿರ್ಧರಿಸುವ ಮೂಲಕ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಭಕ್ತರಿಗೆ ಔತಣವನ್ನು ಏರ್ಪಡಿಸುವ ವ್ಯವಸ್ಥೆ ವಹಿಸಿಕೊಂಡಿದ್ದಾರೆ . ಸುಮಾರು 50 ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ನಟನು ಊಟಕ್ಕೆ ಹಣವನ್ನು ನೀಡುತ್ತಾರೆ ಎನ್ನಲಾಗಿದೆ. ಆದರೆ, ಇದು ಸುಳ್ಳು ಸುದ್ದಿ ಎಂದು ರಾಷ್ಟ್ರೀಯ ಮಾಧ್ಯಮವೊಂದು, ನಟನ ತಂಡದೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *