ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು…ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ

ಬಿಐಇಟಿಸಿ ಕೇಂದ್ರದಿಂದ ಜಾಗತಿಕ ಏರೋಸ್ಪೇಸ್ ಉದ್ಯಮದ ಪ್ರಗತಿಗೆ ನೆರವು ನೀಡಲಾಗುತ್ತಿದೆ. 3,000ಕ್ಕೂ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದುವ ಗುರಿಯನ್ನು ಬಿಐಇಟಿಸಿ ಹಾಕಿಕೊಂಡಿದೆ. ಸಂಶೋಧನೆ ಮತ್ತು ಅಭಿವೃದ್ಧಿ, ಕೃತಕ ಬುದ್ಧಿಮತ್ತೆ, ಮೆಷಿನ್ ಲರ್ನಿಂಗ್, ಇಂಡಸ್ಟ್ರಿಯಲ್ ಇಂಟರ್ನೆಟ್ ಆಫ್ ಥಿಂಗ್ಸ್, ಕ್ಲೌಡ್ ಕಂಪ್ಯೂಟಿಂಗ್, ಮಾಡೆಲ್ ಆಧಾರಿತ ಇಂಜಿನಿಯರಿಂಗ್ ಮತ್ತು ಅಡ್ಡಿಟಿವ್ ಉತ್ಪಾದನೆಯತ್ತ ಗಮನ ಕೇಂದ್ರೀಕರಿಸಲಿದೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

