Breaking News

22ರಂದು ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಜೆ ಇಲ್ಲ: ಹೇಗಿದೆ ಗೊತ್ತಾ ಹೈ ಸೆಕ್ಯೂರಿಟಿ..!

ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ ಪೊಲೀಸ್ (Police) ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ.

ಒಂದು ವೇಳೆ ರಜೆಯಲ್ಲಿರುವವರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ

ಈ ಹಿಂದಿನ ಕೋಮುಗಲಭೆಗಳ (Communal Riots) ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ರೌಡಿಶೀಟರ್‌ಗಳ ಮೇಲೂ ನಿಗಾ ವಹಿಸಲಾಗಿದೆ.

ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಧರ್ಮದ ಮುಖಂಡರನ್ನ ಕರೆಸಿ ಶಾಂತಿಪಾಲನಾ ಸಭೆ ನಡೆಸಬೇಕು. ಈ ಬಗ್ಗೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡುವಂತೆ ಸೂಚಿಸಲು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *