ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನು ಯಾವುದೇ ತೀರ್ಮಾನ ಪ್ರಕಟಿಸಿಲ್ಲ.ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ದೆಹಲಿ, ಪುದುಚೇರಿ, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು, ಒಡಿಶಾ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ.

ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರಿಸ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಕೂಡ ರಜೆ ಘೋಷಣೆ ಮಾಡಿವೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಕೇಂದ್ರ ಸರಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದ್ದು, ಷೇರುಪೇಟೆಗೂ ರಜೆ ಇರಲಿದೆ. ಕರ್ನಾಟಕದಲ್ಲಿ ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ ನಾಯಕರು ಹಾಗೂ ವಿವಿಧ ಸಂಘಟನೆಗಳು ಮನವಿ ಮಾಡಿದ್ದರೂ ಸರ್ಕಾರ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

