Breaking News

ವಿಜಯೇಂದ್ರ ನೆತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ: ಶೆಟ್ಟರ್ ಸೇರಿದಂತೆ ಅನೇಕರು ಭಾಗಿ.

ಬೆಂಗಳೂರು : ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಆರಂಭವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರ ನೇತೃತ್ವ ವಹಿಸಿದ್ದಾರೆ. ಲೋಕಸಭೆ ಸಮರಕ್ಕೆ ತಾಲೀಮು ನಡೆಸುತ್ತಿರುವ ತಂದೆ, ಮಗ, ಇಂದು ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಮಂದಿನ ರೂಪುರೇಷಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗಿಯಾಗುವ ಸಾಧ್ಯತೆಗಳಿದ್ದು, ಕಾರ್ಯಕಾರಣಿ

ಸಭೆಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉದ್ಘಾಟಿಸಿದರು. ಸಭೆಯಲ್ಲಿ ಮಾಜಿ ಸಿಎಂಗಳು, ಮಾಜಿ ಸಚಿವರು, ಶಾಸಕರು ಎಲ್ಲಾ ಜಿಲ್ಲಾ ಅಧ್ಯಕ್ಷರು ತಾಲೂಕು ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಸಭೆಗೆ ಮಾಜಿ ಸಿಎಂಗಳಾದ ಬಿ ವೈ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ. ವಿಪಕ್ಷ ನಾಯಕ ಆರ್ ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ, ಸೇರಿದಂತೆ ಮಾಜಿ ಹಾಲಿ ಶಾಸಕರು ಆಗಮಿಸಿದ್ದಾರೆ. ಕಾರ್ಯಕಾರಣಿ ಸಭೆಗೆ ಆಗಮಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅವರು ಆಗಮಿಸುತ್ತಿದ್ದಂತೆ ಶಾಸಕ ಶರಣು ಸಾಲಗಾರ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು. ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಕಾರ್ಯಕಾರಿಣಿಯನ್ನು ಉದ್ಘಾಟಿಸಲಾಯಿತು. ಬಳಿಕ ಭಾರತಮಾತೆ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *