Breaking News

ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ, ವಿಡಿಯೋ ವೈರಲ್‌..

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಉಲ್ಲೇಖಿಸಿ “ಅಬ್ಕಿ ಬಾರ್, 400 ಪಾರ್”( ಈ ಬಾರಿ 400 ದಾಟುತ್ತದೆ) ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಗುರುವಾರ ಸದನದಲ್ಲಿ ದೇಶದ ಮಧ್ಯಂತರ ಬಜೆಟ್ ಮಂಡಿಸಲಾಯಿತು. ಮೋದಿ ಸರ್ಕಾರದ ಎರಡನೇ ಅವಧಿಯ ಈ ಕೊನೆಯ ಬಜೆಟ್ಗಾಗಿ ಕರೆಯಲಾದ ಬಜೆಟ್ ಅಧಿವೇಶನದಲ್ಲಿ ಶುಕ್ರವಾರ ಚರ್ಚೆ ಮುಂದುವರಿಯಿತು. ರಾಜ್ಯಸಭೆಯಲ್ಲಿ ಶುಕ್ರವಾರ ನಡೆದ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “330-334 ಸ್ಥಾನಗಳೊಂದಿಗೆ ನಿಮಗೆ ಬಹುಮತವಿದೆ. ಈ ಬಾರಿ ಅದು 400ಕ್ಕಿಂತ ಹೆಚ್ಚಾಗಲಿದೆ” ಎನ್ನುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೆರೆದಿದ್ದ ಆಡಳಿತ ಪಕ್ಷದ ಸಂಸದರು ಮೇಜನ್ನ ಬಡಿದು, ಚಪ್ಪಾಳೆ ತಟ್ಟಿ ಘೋಷಣೆಗಳನ್ನ ಕೂಗಿದರು. ಸಧ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಈ ವಿಡಿಯೋವನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಪ್ರತಿಪಕ್ಷಗಳು ಸಹ ಒಪ್ಪಿಕೊಂಡಿವೆ, ಬಿಜೆಪಿ ಮೂರನೇ ಬಾರಿಗೆ 400 ಗಡಿ ದಾಟುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *