ಹಂಪಿ ಉತ್ಸವದ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ತಿಲಕ ಇಡಲು ಬಂದಾಗ ನಿರಾಕರಿಸಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಹಂಪಿ ಉತ್ಸವ ನಿಮಿತ್ತ ವಿಜಯನಗರ ಜಿಲ್ಲೆ ಹೊಸಪೇಟೆಗೆ ಶುಕ್ರವಾರ ಆಗಮಿಸಿದ ವೇಳೆ ಎಸ್‌ಪಿ ಕಚೇರಿ ಉದ್ಘಾಟಿಸಿದರು. ಆಗ ದೇವರ ಫೋಟೋಗೆ ಪುಷ್ಪ ಅರ್ಪಿಸಿದ ಬಳಿಕ ಅರ್ಚಕರು ತಂದ ಮಂಗಳಾರತಿ ತಟ್ಟೆಯಲ್ಲಿ ಹಣ ಹಾಕಿದರು. ಈ ವೇಳೆ ಅರ್ಚಕರು ಸಿಎಂ ಸಿದ್ದರಾಮಯ್ಯ ಹಣೆಗೆ ತಿಲಕ ಇಡಲು ಮುಂದಾದಾಗ ಕೈಸನ್ನೆ ಮೂಲಕ ಬೇಡ ಎಂದು ಹೇಳಿ ತಿರಸ್ಕರಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಪಕ್ಷದ ಮುಖಂಡರೊಬ್ಬರು ಕೇಸರಿ ಬಣ್ಣದ ಪೇಟ ತೊಡಿಸಲು ಮುಂದಾದಾಗಲೂ ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದರು..
bigtvnews | Hubli Dharwad News | Kannada News | Karnataka News Hubli News | News In Hubli | Local news

