Breaking News

ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು..

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ವಿಷಯದಲ್ಲಿ ಧಾರ್ಮಿಕ ಭಾವನೆ ಕೆರಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಐದು ವಿಷಯಗಳು ಬೆಳಗ್ಗೆ 10:15ಕ್ಕೆ ಆರಂಭವಾದರೆ ಮಾರ್ಚ್‌ 1ರ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಾರ್ಚ್‌ 1 ಶುಕ್ರವಾರ ಒಂದೇ ದಿನ ಮಧ್ಯಾಹ್ನದ ನಂತರ ಪರೀಕ್ಷೆ ನಡೆಸುತ್ತಿರುವುದು ಯಾಕೆ

ಎನ್ನುವುದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿತ್ತು.​ಕರ್ನಾಟಕ ರಾಜ್ಯ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಶುಕ್ರವಾರ ಹೊರತು ಪಡಿಸಿ ಎಲ್ಲಾ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿ ನಡೆಯಲಿದೆ. ಯಾಕೆ ನಮಾಜ್‌ ಸಮಯಕ್ಕಾ ಎಂದು ಸಾಮಾಜಿಕ ಜಾಲತಾಣದಲ್ಲಿ ಸೂಲಿಬೆಲೆ ಪ್ರಶ್ನಿಸಿದ್ದರು.ಎನ್‌ಎಸ್‌ಯುಐ ಕಾರ್ಯಕರ್ತರು ನೀಡಿದ ದೂರಿನ ಆಧಾರದಲ್ಲಿ ಸಿಆರ್‌ಪಿಸಿ ಕಲಂ 157 ಅಡಿ ಎಫ್‌ಐಆರ್‌ ದಾಖಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *