Breaking News

ಕೊಳೆತ ಸ್ಥಿತಿಯಲ್ಲಿ ದೊರೆತ ವ್ಯಕ್ತಿ ಶವ: ಆತ್ಮಹತ್ಯೆಯೋ..? ಕೊಲೆಯೋ..?

ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಅಸ್ಥಿಪಂಜರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಆಸ್ಪತ್ರೆಯ ಮಹಿಳಾ ಹಾಸ್ಟೆಲ್ ಹಿಂಭಾಗದಲ್ಲಿನ ಚರಂಡಿಯ ಸ್ವಚ್ಚತೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಅಸ್ಥಿಪಂಜರದ ಮೂಳೆ ಹಾಗೂ ತಲೆ ಬುರುಡೆ ಪತ್ತೆಯಾಗಿದೆ. ಕಳೆದ ಐದಾರು ತಿಂಗಳು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಧರಿಸಿರುವ ಬಟ್ಟೆಯಲ್ಲಿ ಪಿಓಪಿ ಫೌಡರ್ ಇದ್ದು, ಅದರಳೊಗೆ ಮೂಳೆಗಳು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ.ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *