Breaking News

25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ.
ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಮತ್ತು ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ ( ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ). ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆಯೊಂದಿಗೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *