Breaking News

ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಕಾಮುಕರ ಹೆಡೆಮುರಿ ಕಟ್ಟಿದ ಪೊಲೀಸರು..

ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್‌ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು..ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ ತಮ್ಮ ಕಾರಿನಲ್ಲಿ ಕೂಡ್ರಿಸಿಕೊಂಡು, ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ ಎಂದೂ ದೂರಿನಲ್ಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *