Breaking News

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು.ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂ

ದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ

ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *