ಧಾರಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ತಾಯಿ ಸಾವಿತ್ರಿ ಸರಕಾರ (32) ಎಂಬಾಕೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಇವರನ್ನ ಕತ್ತು ಹಿಸುಕಿ ಕೊಲೆಗೈದಿದ್ದಾಳೆ.ಈ ಘಟನೆ

ಸಂಬಂಧಿಸಿದಂತೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಬೆಳಿಗ್ಗೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.ಮೊರಬ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದ್ದು, ಜನತೆ ಬೆಚ್ಚಿ ಬಬೀಳುವಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

