(Police Department) ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ (Inter District Transfer) ಕೊನೆಗೂ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ (Government Green Signal) ನೀಡಿದೆ. ರಾಜ್ಯದಲ್ಲಿ ಪತಿ-ಪತ್ನಿ ಪೊಲೀಸ್ ವರ್ಗಾವಣೆಗೆ (Husband-wife transfer) ಸಂಬಂಧಿಸಿ ಭಾರಿ ಆಗ್ರಹ ಕೇಳಿಬಂದಿತ್ತು. ಅಂತರ್ಜಿಲ್ಲಾ ವರ್ಗಾವಣೆ (Police Transfer) ಕೊಡದೆ ಇದ್ದರೆ ದಯಾ ಮರಣವನ್ನಾದರೂ ಕೊಡಿ ಎಂದೂ ಕೆಲವರು ಮನವಿ ಮಾಡಿದ್ದರು. ಇದೆಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಅವರು ಸೂಚಿಸಿದ್ದಾರೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿಸಿದ್ದಾರೆ. ಅಂದಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ದಯಾಮರಣ ನೀಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಪೇದೆಯೊಬ್ಬರು ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

