Breaking News

ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣ’ SIT ತನಿಖೆಗೆ ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ..

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು ಎಸ್ ಐ ಟಿಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ

ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ನಂತರ ವೈದೇಹಿ ಆಸ್ಪತ್ರೆಗೆ ಕೂಡ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *