Breaking News

ಸುಳ್ಳು ಸುದ್ದಿ’ಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ : ‘ಸಮನ್ವಯ ಸಮಿತಿ’ ರಚಿಸಿ ರಾಜ್ಯ ಸರ್ಕಾರ ಆದೇಶ..

ಬೆಂಗಳೂರು ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್ಲೈನ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಸೈಬರ್ ವಿಭಾಗದ (ಸಿ ಆಯಂಡ್ ಎನ್) ಎಡಿಜಿಪಿ, ಗೃಹ ಇಲಾಖೆ, ಐಟಿಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಮಾಹಿತಿ ಇಲಾಖೆಯ ಕಾರ್ಯದರ್ಶಿ, ಸರ್ಕಾರದ ನಾಮನಿರ್ದೇಶನ ಮಾಡಿದ ಕಾನೂನು ಸಲಹೆಗಾರ, ಐಟಿಬಿಟಿ ಇಲಾಖೆ ಒದಗಿಸುವ ಸೇವಾದಾರರು,

ಸರ್ಕಾರ ನಾಮನಿರ್ದೇಶನ ಮಾಡುವ ತಲಾ ಒಬ್ಬರು ಸಾರ್ವಜನಿಕ ಮತ್ತು ತಾಂತ್ರಿಕ ವಲಯದವರು ಈ ಸಮಿತಿಯ ಸದಸ್ಯರಾಗಿರುತ್ತಾರೆ . ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳು ಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು . ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳು ಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *