ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ ಜನರು ಜೀವದ ಹಂಗು ತೊರೆದು ಓಡಾಡುವಂತಾಗಿದೆ.ಹೌದು.. ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್ ನಲ್ಲಿ ಖಾಸಗಿ ಟೆಂಪೋ ವಾಹನಕ್ಕೆ ಜನರು ಹಿಂದೆ ಮುಂದೆ ಜೋತು ಬಿದ್ದು, ಪ್ರಯಾಣ ನಡೆಸುತ್ತಿರುವುದು ನಿಜಕ್ಕೂ ಇದೇನಾ ಟ್ರಾಫಿಕ್ ರೂಲ್ಸ್ ಎಂದು ಪ್ರಶ್ನಿಸುವಂತಾಗಿದೆ.ಇನ್ನೂ ಹುಬ್ಬಳ್ಳಿಯ ಬಹುತೇಕ ಕಡೆಯಲ್ಲಿ ಜನರು ಇಂತಹದೊಂದು ದುಸ್ಸಾಹಸಕ್ಕೆ ಕೈ ಹಾಕಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಈ ಬಗ್ಗೆ ಸಂಚಾರಿ ಪೊಲೀಸರು ಕಡಿವಾಣ ಹಾಕುವ ಮೂಲಕ ಜನರಿಗೆ ಹಾಗೂ ವಾಹನ ಚಾಲಕರಿಗೆ ಜಾಗೃತಿ ಮೂಡಿಸಬೇಕಿದೆ.
Check Also
ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

