Breaking News

ಭೀಕರ ರಸ್ತೆ ಅಪಘಾತ : ಖ್ಯಾತ ನಟಿ ‘ಅರುಂಧತಿ ನಾಯರ್’ ಸ್ಥಿತಿ ಗಂಭೀರ..!

ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಮಾರ್ಚ್ 14 ರಂದು ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಸದ್ಯ, ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಸಹೋದರಿ ಆರತಿ ನಾಯರ್ ಹೇಳಿದ್ದಾರೆ. ಅವರು ಪ್ರಸ್ತುತ ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರು

ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.ವರದಿಗಳ ಪ್ರಕಾರ, ಕೋವಲಂ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಅರುಂಧತಿ ಅವರ ತಲೆಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ನನ್ನ ಸಹೋದರಿ ಅರುಂಧತಿ ನಾಯರ್ ಮೂರು ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದು ನಿಜ. ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಎಂದು ಆರತಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *