ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ರೌಡಿಶೀಟರ್ ಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕಮೀಷನರೇಟ್ ಮುಂದಾಗಿದೆ. ಈಗಾಗಲೇ ಏಳು ಜನರನ್ನು ಗಡಿಪಾರು ಮಾಡಿರುವ ಪೊಲೀಸ್ ಕಮೀಷನರ್ ಈಗ ಮತ್ತಷ್ಟು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರಿಗೆ ಹಾಗೂ ರೌಡಿಶೀಟರ್ ಪಟ್ಟಿಯಲ್ಲಿದ್ದು ಕೂಡ ಅನೇಕ ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟುಮಾಡುವ ಹಾಗೂ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈಗಾಗಲೇ ಚುನಾವಣೆ ಪೂರ್ವ ಹಾಗೂ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಏಳು ಜನ ರೌಡಿಶೀಟರ್ ಗಡಿಪಾರು ಮಾಡಿರುವ ಪೊಲೀಸ್ ಆಯುಕ್ತರು ಇನ್ನೂ ದೊಡ್ಡ ಲಿಸ್ಟ್ ಹಿಡಿದುಕೊಂಡು ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇನ್ನೂ ಕೂಡ ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಗಡಿಪಾರು ಮಾಡುವ ಸಾಧ್ಯತೆಯಿದೆ. ಸಮಾಜದ ಶಾಂತಿ ಸೌಹಾರ್ದತೆಯ ಹಿತದೃಷ್ಟಿಯಿಂದ ರೌಡಿಶೀಟರ್ ಗಡಿಪಾರು ನಿರ್ಧಾರ ಕೈಗೊಂಡಿದೆ. ರೇಣುಕಾ ಸುಕುಮಾರ ಪೊಲೀಸ್ ಆಯುಕ್ತರು ಈಗಾಗಲೇ ರೌಡಿಶೀಟರ್ ಮನೆಗಳಿಗೆ ಭೇಟಿ ನೀಡಿ ಸೂಚನೆ ನೀಡಿರುವ ಪೊಲೀಸರು, ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಬೇಕಾದರೂ ಗಡಿಪಾರು ಮಾಡುವ ಸಾಧ್ಯತೆಯಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಾಚರಣೆ ನಡೆಸಲು ಕಮೀಷನರೇಟ್ ಮುಂದಾಗಿದೆ.
Check Also
ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

