Breaking News

ಪೊಲೀಸ್ ಕಮೀಷನರೇಟ್ ಮತ್ತೊಂದು ಪ್ರಯೋಗ: ಸಾರ್ವಜನಿಕ ಸಹಭಾಗಿತ್ವದಲ್ಲಿ ಟ್ರಾಫಿಕ್ ಚಾಂಪಿಯನ್ಸ್..

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಕೆಲಸ ನಿರ್ವಹಿಸಲು ಮುಂದಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರದ ಪ್ರಮುಖ ವೃತ್ತಗಳಲ್ಲಿ ಸಂಚಾರ ಪೊಲೀಸರಂತೆ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರನ್ನು ಆಯ್ಕೆ ಮಾಡಿಕೊಂಡಿದ್ದು, ಟ್ರಾಫಿಕ್‌ ಚಾಂಪಿಯನ್ಸ್‌ ಹೆಸರಲ್ಲಿ ಕಾರ್ಯನಿರ್ವಹಿಸಲಿದ್ದಾರೆ.ಹೌದು.. ಸಂಚಾರ ಡಿಸಿಪಿ ರವೀಶ್‌ ಆರ್‌. ನೇತೃತ್ವದಲ್ಲಿ ತರಬೇತಿ ಪಡೆದ ಸ್ವಯಂ

ಸೇವಕರನ್ನು ನಗರದ ಕಾರವಾರ ರಸ್ತೆಯ ಸಿಎಆರ್‌ ಮೈದಾನದಲ್ಲಿ ಭೇಟಿ ಮಾಡಿ, ಅವರ ಕವಾಯತು ಹಾಗೂ ಸಂಚಾರ ನಿಯಮಾವಳಿಗಳ ಸಂಜ್ಞೆಯನ್ನು ವೀಕ್ಷಿಸಿದರು. ಅವಳಿನಗರದಲ್ಲಿ ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸುವುದು ಕಡಿಮೆ. ಮೇಲಿಂದ ಮೇಲೆ ದಂಡ ಹಾಕಿದರೂ ಅದೇ ತಪ್ಪು ಮಾಡುತ್ತಲೇ ಇರುತ್ತಾರೆ. ಸಂಚಾರ ನಿಯಮದ ಬಗ್ಗೆ ಅವರನ್ನು ಜಾಗೃತಗೊಳಿಸಲು ಸಾರ್ವಜನಿಕರನ್ನೇ ಪಾಲುದಾರರನ್ನಾಗಿ ಮಾಡಿಕೊಳ್ಳಲು ಈ ಯೋಜನೆ ರೂಪಿಸಲಾಗಿದೆ. ಸ್ವಯಂ ಪ್ರೇರಿತರಾಗಿ ಬಂದ ವಿವಿಧ ಸಂಘ, ಸಂಸ್ಥೆಗಳ ಹಾಗೂ ಸ್ಥಳೀಯ ನಾಗರಿಕರನ್ನು ಆಯ್ಕೆ ಮಾಡಿ, ಒಂದುವಾರ ತರಬೇತಿ ನೀಡಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಸಂಚಾರ ಪೊಲೀಸರಂತೆ

ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.‌ಬೆಂಗಳೂರಿನಲ್ಲಿ ಈ ಯೋಜನೆ ಜಾರಿಯಲ್ಲಿದ್ದು, ಇಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಂಚಾರ ಡಿಸಿಪಿ, ಎಸಿಪಿ ನೇತೃತ್ವದಲ್ಲಿ ಮೊದಲ ಹಂತದಲ್ಲಿ 56 ಮಂದಿ ತಂಡ ರಚಿಸಲಾಗಿದೆ. ಅಪಘಾತ ನಿಯಂತ್ರಣ ಹಾಗೂ ಸಂಚಾರ ಸುರಕ್ಷತೆ ಬಗ್ಗೆ ಸವಾರರಿಗೆ ಸಂದೇಶ ಸಾರುವ ಜವಾಬ್ದಾರಿ ನೀಡಲಾಗಿದೆ. ತಮಗೆ ಅನುಕೂಲವಾದ ದಿನ ಹಾಗೂ ಸಮಯದಲ್ಲಿ ಬಂದು ಕೆಲಸ ಮಾಡಬಹುದು. ಅವರ ಕಾರ್ಯವೈಖರಿ ನೋಡಿ ಸ್ವಯಂ ಪ್ರೇರಿತರಾಗಿ ಯಾರಾದರೂ ಮುಂದೆ ಬಂದರೆ, ಎರಡನೇ ಹಂತದಲ್ಲಿ ಮತ್ತೊಂದು ತಂಡ ರಚಿಸಿ ತರಬೇತಿ ನೀಡಲು ಚಿಂತನೆ ನಡೆಸಲಾಗುತ್ತಿದೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *