Breaking News

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಪೊಲೀಸ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು. ಈ ನಿಟ್ಟಿನಲ್ಲಿ ಆರೋಪಿತರಾದ ಪ್ರಕಾಶ ಬಾಬು ಕಾಂಬಳೆ, ವಿಷ್ಣು ಶಿವಣ್ಣ ನಂದ್ಯಾಳ ಎಂಬುವ ಇಬ್ಬರು ಆರೋಪಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಗೋಕುಲ ರೋಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾದ ಒಟ್ಟು 4 ಮೋಟಾರ ಸೈಕಲ್, ಹಳೇಹುಬ್ಬಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕಳುವಾದ 3 ಮೋಟಾರ ಸೈಕಲ್, ಹುಬ್ಬಳ್ಳಿ ವಿದ್ಯಾನಗರ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಕಳುವಾದ 1 ಮೋಟಾರ ಸೈಕಲ್, ಬೆಂಡಿಗೇರಿ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಕಳುವಾದ 1 ಮೋಟಾರ ಸೈಕಲ್ ಹಾಗೂ ವಿಜಯಪೂರ ಶಹರದಲ್ಲಿ ಕಳ್ಳತನವಾದ 2 ಮೋಟಾರ ಸೈಕಲ್‌ಗಳು ಹೀಗೆ ಒಟ್ಟು 7,80,000 ಮೌಲ್ಯದ 11 ಮೋಟಾರ ಸೈಕಲ್‌ಗಳನ್ನು ವಶಪಡಿಸಿಕೊಂಡು ಆರೋಪಿತರಿಗೆ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Share News

About Shaikh BigTv

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *