ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ

ಪೊಲೀಸ್ ಧ್ವಜ ದಿನಾಚರಣೆಗೆ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಎಲ್.ಕಸ್ತೂರಿ ಹಾಗೂ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ವಿದ್ಯುಕ್ತವಾಗಿ ಚಾಲನೆ ನೀಡಿದರು.ಪ್ರತಿವರ್ಷದಂತೆ ಈ ವರ್ಷವೂ ಕೂಡ ಪೊಲೀಸ್ ಕಮೀಷನರೇಟ್ ನಿಂದ ಪೊಲೀಸ್ ಧ್ವಜ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಕವಾಯತ್ ಮೂಲಕ

ಅತಿಥಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಅಲ್ಲದೆ ಅತಿಥಿಯಾಗಿ ಆಗಮಿಸಿದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಇನ್ನೂ ಪೊಲೀಸ್ ಸಿಎಆರ್ ಮೈದಾನದಲ್ಲಿ ವಿವಿಧ ಪೊಲೀಸ್ ಪಡೆಗಳು ಕವಾಯತ್ ನಲ್ಲಿ ಭಾಗವಹಿಸಿ ನೋಡುಗರ ಕಣ್ಮನ ಸೆಳದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

