Breaking News
Featured Video Play Icon

ಪ್ರಚಾರದ ತೆವಲಿಗಾಗಿ ಪ್ರಧಾನಿ ವಿರುದ್ಧ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡ್ತಾರೆ – ಕೇಂದ್ರ ಸಚಿವ ಜೋಶಿ ಕಿಡಿ…

ಹುಬ್ಬಳ್ಳಿ : ಮೋದಿ ಪ್ರಧಾನ ಮಂತ್ರಿಯಲ್ಲ, ಪ್ರಚಾರಮಂತ್ರಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ. ಕೇವಲ ಪ್ರಚಾರದ ತೆವಲಿಗಾಗಿ ಸಚಿವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಟಾಂಗ್ ನೀಡಿದರು. ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಕಾಂಗ್ರೆಸ್ ಪಕ್ಷವು ಇದೀಗ ಯಾವ ಸ್ಥಿತಿಯಲ್ಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವಪ್ರಹ್ಲಾದ ಜೋಶಿ ಕಿಡಿ ಕಾರಿದರು.ನಾನು ಸ್ಟಾ‌ರ್ ಪ್ರಚಾರಕ, ನನ್ನನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್’ನಲ್ಲಿ ಮೊದಲಿಂದಲೂ ಎಲ್ಲವೂ ಸರಿಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಒಳಜಗಳವಿದೆ. ಹಾಗಾಗಿ, ಇಂತಹ ಹೇಳಿಕೆಗಳು ಕಾಂಗ್ರೆಸ್‌ ಪಕ್ಷದಲ್ಲಿ ಮೊದಲಿಂದಲೂ ಕೇಳಿಬರುತ್ತಿವೆ. ಇದಕ್ಕೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *