ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಹೌದು.. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಅಲ್ಲದೇ ಲೋಕಸಭಾ ಕ್ಷೇತ್ರದ ಎಸ್‌ಟಿ ಮುಖಂಡರು ಹಾಗೂ ಬಹುತೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಮೆರಗನ್ನು ತಂದರು.ಇನ್ನೂ ಸಮಾವೇಶದಲ್ಲಿ ಎಸ್.ಟಿ ರಾಜ್ಯಾಧ್ಯಕ್ಷ ಹನುಮಂತರಾಜು, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ ಸೇರಿದಂತೆ ಬಹುತೇಕ ನಾಯಕರು ಭಾಗವಹಿಸಿದ್ದರು.
Check Also
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …
bigtvnews | Hubli Dharwad News | Kannada News | Karnataka News Hubli News | News In Hubli | Local news

