Breaking News

ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ವಿಶ್ವಮಾನವರ ದಿನಾಚರಣೆ: ಭರದಿಂದ ಸಾಗಿದ ಸಿದ್ಧತೆ…!

ಹುಬ್ಬಳ್ಳಿ: ಜನ್ಮದಿನದ ಸಂಭ್ರಮದಲ್ಲಿಯೂ ಬುದ್ಧ, ಬಸವ, ಅಂಬೇಡ್ಕರ್ ರ ತತ್ವಾದರ್ಶವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ ಸಚಿವ ಸಂತೋಷ ಲಾಡ್ ಈಗ ಮತ್ತೊಂದು ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹೌದು..ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವಮಾನವರ

ದಿನಾಚರಣೆಯನ್ನು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಅಂಗವಾಗಿ ವಿಶ್ವಮಾನವರ ದಿನಾಚರಣೆ ಆಯೋಜಿಸಲಾಗಿದ್ದು, ಈಗಾಗಲೇ ಸಕಲ‌

ಸಿದ್ಧತೆ ಕೂಡ ಮಾಡಲಾಗಿದೆ. ಸಚಿವ ಸಂತೋಷ ಲಾಡ್ ಅವರ ಅಭಿಮಾನ ಸಮರ್ಪಣೆಗಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ಸಂಗೀತ ನಿರ್ದೇಶಕ ಹಾಗೂ ಗೀತ ರಚನೆಕಾರ ಡಾ.ನಾಗೇಂದ್ರ ಪ್ರಸಾದ ಅವರಿಂದ ವಿಶೇಷ ಗೀತೆಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಮೂಲಕ ಸಚಿವ ಸಂತೋಷ ಲಾಡ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಯವರ ಗೆಲುವಿನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿಯ

ನೆಹರೂ ಮೈದಾನದಲ್ಲಿ ಈಗಾಗಲೇ ವೇದಿಕೆ ಸೇರಿದಂತೆ ಸಾರ್ವಜನಿಕರ ಆಸನಕ್ಕೆ ಸಕಲ ಸಿದ್ಧತೆ ನಡೆದಿದ್ದು, ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬಹುದೊಡ್ಡ ಸಮಾವೇಶ ನಡೆಯಲಿದ್ದು, ಬುದ್ಧ ಬಸವ ಅಂಬೇಡ್ಕರ್ ರ ತತ್ವ ಆದರ್ಶಗಳು ಮತ್ತೊಮ್ಮೆ ಮುನ್ನೆಲೆಗೆ ಬರಲಿದೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *