Breaking News
Featured Video Play Icon

ಕಾರ್ಪೋರೆಟರ್ ಮಗಳ‌ ಕೊಲೆ ಪ್ರಕರಣ: ಘಟನಾಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ…

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಡಿಸಿಪಿ ರವೀಶ್ ಅವರು ಬಿವ್ಹಿಬಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೌದು.. ಸಂಜೆಯ ವೇಳೆಯಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆಯ ಪ್ರಕರಣ ತನಿಖೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದ ಪೊಲೀಸ್ ಆಯುಕ್ತರು ಸ್ಥಳ ಪರಿಶೀಲನೆ ಮಾಡಿದ್ದಾರೆ‌. ಅಲ್ಲದೇ ವಿದ್ಯಾರ್ಥಿನಿಯ ಕೊಲೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಇನ್ನೂ ಕಮೀಷನರೇಟ್ ನ ತಂಡ ಕಾಲೇಜಿನ ಆವರಣದಲ್ಲಿ ಹಾಗೂ ಕಿಮ್ಸ್ ಗೂ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share News

About Shaikh BigTv

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *