ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ ನಡೆದಿವೆ. ಅಲ್ಲದೇ ಬಹುತೇಕ ಪ್ರಮುಖರು ಮನವಿ ಮಾಡಿ ಸಾಕಷ್ಟು ಕೂಡಲೇ ತನಿಖೆ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರವಾಗಿ ತನಿಖೆ ಪೂರ್ಣಗೊಳಿಸುತ್ತೇವೆ ಎಂದರು.ಕೊಲೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈಗಲೇ ಎಲ್ಲವನ್ನೂ ಬಹಿರಂಗ ಪಡಿಸಲು ಆಗಲ್ಲ. ಅಲ್ಲದೇ ನಾವು ಪ್ರೀತಿ, ಪ್ರೇಮದ ವಿಚಾರದ ಬಗ್ಗೆ ತನಿಖೆ ನಡೆಸುತ್ತಿಲ್ಲ. ಕೊಲೆಯ ಬಗ್ಗೆ ಎಲ್ಲಾ ಆಯಾಮಾದಿಂದ ತನಿಖೆ ನಡೆಸಲಾಗುತ್ತದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಕೂಡ ಮಹಿಳೆಯರು ವಿಚಲಿತರಾಗದೇ ಧೈರ್ಯವಾಗಿರಬೇಕು. ಅಲ್ಲದೇ ಅವಳಿನಗರದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವ ಮೂಲಕ ಭದ್ರತೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
Check Also
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …
bigtvnews | Hubli Dharwad News | Kannada News | Karnataka News Hubli News | News In Hubli | Local news

