Breaking News

ಹಳೇ ಹುಬ್ಬಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ: ಮೂವರು ಅಂತರರಾಜ್ಯ ಮನೆಗಳ್ಳರ ಬಂಧನ..

ಹುಬ್ಬಳ್ಳಿ:‌ ಹಳೇಹುಬ್ಬಳ್ಳಿ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ 3 ಜನ ಅಂತರ ರಾಜ್ಯ ಮನೆ ಕಳ್ಳರ ಬಂಧನ ಮಾಡಿದ್ದು, 8,68,000ರೂ. ಮೌಲ್ಯದ 10.4 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ

ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಶಾಂತನಗರ, ಸಿದ್ದಲಿಂಗೇಶ್ವರ ಕಾಲನಿ, ಆನಂದನಗರ. ಹಾಗೂ ಬೈಲ್‌ಹೊಂಗಲ್, ಹುಕ್ಕೇರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಆಯುಕ್ತರು ಮಾರ್ಗದರ್ಶನದಲ್ಲಿ

ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ ರವರಾದ ಎಸ್.ಎಚ್. ಯಳ್ಳೂರ, ಪಿ.ಎಸ್.ಐ ಗಳಾದ ರೂಪಕ ಡಿ., ವಿ.ಎಸ್. ಚವಡಿ ನೇತೃತ್ವದ ತಂಡ ಆರೋಪಿತರ‌ನ್ನು ಪತ್ತೆ ಹಚ್ಚಿ ಕಳ್ಳತನವಾದ ಒಟ್ಟು 10.4 ಗ್ರಾಂ ಚಿನ್ನಾಭರಣ, 160 ಗ್ರಾಂ ಬೆಳ್ಳಿಯ ಒಡವೆಗಳು ಕಳ್ಳತನ ಮಾಡಲು ಬಳಸಿದ ಕಾರನ್ನು ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ, ಪೊಲೀಸ್ ಸಬ್ ಇನ್ಸಪೆಕ್ಟರ, ಸಹಾಯಕ ಪೊಲೀಸ್ ಸಬ್ ಇನ್ಸಪೆಕ್ಟರ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿ ಶ್ಲಾಘಿಸಿ, ಮಾನ್ಯ ಪೊಲೀಸ್ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ..

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *