ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ

ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.ಹೌದು.. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು,

ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳು ಬಂದ್ ಮಾಡಿ, ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ ಹಾಕಿ ಬಂದ್‌ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ.ಇನ್ನೂ ಹಂತಕ ಫಯಾಜ್‌ನಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಿದ್ದು, ಬಂದ್ ಹಿನ್ನೆಲೆಯಲ್ಲಿ ಬಿಕೋ ಎನ್ನುತ್ತಿರುವ ಮಾರುಕಟ್ಟೆಯ ಪ್ರದೇಶಗಳು.
bigtvnews | Hubli Dharwad News | Kannada News | Karnataka News Hubli News | News In Hubli | Local news

