Breaking News

ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧನ ಮಾಡಿದ ಹಳೇ ಹುಬ್ಬಳ್ಳಿ ಪೊಲೀಸರು..

ಹುಬ್ಬಳ್ಳಿ: ಈಗಾಗಲೇ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ವೆಂಕಟೇಶ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಮಾಡಿದೆ. ಈ ನಡುವೆ ಹಳೇಹುಬ್ಬಳ್ಳಿ ಪೊಲೀಸರು ಸಿಐಡಿ ಕ್ರೈಂ ಬ್ರ್ಯಾಂಚ್’ನ ಅಧಿಕಾರಿಗಳು ಎಂದು ಬಂದಿದ್ದ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇತ್ತಿಚೆಗೆ ಹುಬ್ಬಳ್ಳಿ ನಗರದಲ್ಲಿ ಮೂರು ಜನರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು

ಹೇಳಿಕೊಂಡು, ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್ (30) ಎಂಬಾತರಿಗೆ ಮೋಸ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮಹಿಳೆಯಿಂದ ಹೆದರಿಸಿ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೋಸ ಹೋದ ಮಹಿಳೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು‌.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಎಸ್.ಎಚ್.ಯಳ್ಳೂರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು, ಹಳೇ ಹುಬ್ಬಳ್ಳಿಯ ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರನ ಪರಶುರಾಮಗೌಡ

ಪಾಟೀಲ್ (45), ಗಂಗಾವತಿಯ ಕಾರಟಗಿಯ ಮಧು ಎಮ್ (35) ಎಂಬ ಮೂರು ನಕಲಿ ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಎರಡು ಮೊಬೈಲ್, ಹಾಗೂ ಒಂದು ಬುಲೆಟ್ ಬೈಕ್’ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇನ್ನು ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯವನ್ನು ಹು-ಧಾ ಪೊಲೀಸ ಆಯುಕ್ತರು ಶ್ಲಾಘಸಿದ್ದು, ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *