ಹುಬ್ಬಳ್ಳಿ.. ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ ನನ್ನು ಸಿಐಡಿ ಪೊಲೀಸರು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದು, ಇಂದು ಕೊಲೆ ನಡೆದ ಬಿವಿಬಿ ಕಾಲೇಜು ಆವರಣಕ್ಕೆ ಕರೆದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ಮಹಜರು ಮಾಡಿದರು.ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಗ್ಯ ತಪಾಸಣೆ ಮಾಡಿಸಿದ ಸಿಐಡಿ ಅಧಿಕಾರಿಗಳು ನೇರವಾಗಿ ಧಾರವಾಡದಿಂದ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂದ ಕಾಲೇಜಿಗೆ ಕರೆತಂದು ಸ್ಥಳ ಮಹಜರು ಮಾಡಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಸ್ಥಳ ಮಹಜರುಗಾಗಿ ಮೊದಲೇ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತುಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಕರೆತಂದ ಸಿಐಡಿ ಪೋಲಿಸರುಕೊಲೆ ಮಾಡಿದ ಘಟನಾ ಸ್ಥಳದಲ್ಲಿ ಆರೋಪಿ ಕಡೆಯಿಂದ ಮಾಹಿತಿ ಪಡೆದುಕೊಂಡರು. ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಮಹಜರು ಕಾರ್ಯ ನಡೆಯಿತು. ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಇಂದು ತಮ್ಮ ವಶಕ್ಕೆ ಪಡೆದಿದ್ದಾರೆ.ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ.
Check Also
80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು
ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …
bigtvnews | Hubli Dharwad News | Kannada News | Karnataka News Hubli News | News In Hubli | Local news

