Breaking News
Featured Video Play Icon

ಪ್ರಚಾರದ ವೇಳೆ ಪ್ರಹ್ಲಾದ್ ಜೋಶಿಗೆ ತಟ್ಟಿದ ಪ್ರತಿಭಟನೆ ಬಿಸಿ: ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ‍್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿ ನಮ್ಮ ಗ್ರಾಮಕ್ಕೆ ಏನೂ ಕೊಡುಗೆ ಕೊಟ್ಟಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಪ್ರಹ್ಲಾದ್ ಜೋಶಿ ಜಲಜೀವನ್ ಮಿಷನ್ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದೇವೆ ಎಂದರು. ಆಗ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಗ್ರಾಮದ ಯುವಕರು ನಿಮ್ಮ ಅನುದಾನ ಎಲ್ಲಿ ಬಂದಿದೆ? ಯಾರ ಅಭಿವೃದ್ಧಿ ಮಾಡಿದ್ದೀರಿ? ಎಂದು ಕೇಂದ್ರ ಸಚಿವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.ಇದೇ ವೇಳೆ ಕೇಂದ್ರ ಸಚಿವರು ತಮ್ಮ ಭಾಷಣವನ್ನು ಮುಂದುವರೆಸಿದರು ಅದಾಗ್ಯೂ ಪ್ರಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದವರನ್ನು ಬಿಜೆಪಿ ಕಾರ್ಯಕರ್ತರು ಒತ್ತಾಯ ಪೂರ್ವಕವಾಗಿ ಎಳೆದುಕೊಂಡು ಸಮಾಧಾನ ಪಡಿಸಲು ಮುಂದಾದರು.ಇದರಿಂದ ಗ್ರಾಮದಲ್ಲಿ ಕೆಲಲಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೆಲಕಾಲ ಮುಜುಗರಕ್ಕೆ ಒಳಗಾದರು.ಈ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಪರ-ವಿರೋಧ ಚರ್ಚೆಗೆ ಕಾರಣವಾಗುತ್ತಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *