ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು..

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್. ಸಂತೋಷ ಆಗಮಿಸಿರುವುದು ನಿಜಕ್ಕೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ ಅವರಿಗೆ ಅದ್ದೂರಿಯಾಗಿ ಸ್ವಾಗತಕೋರಲಾಯಿತು.ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ದತ್ತಮೂರ್ತಿ ಕುಲಕರ್ಣಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ಸಂತೋಷ ಚೌವ್ಹಾಣ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

