Breaking News
Featured Video Play Icon

ರಾಜ್ಯದಲ್ಲಿ ಹಿಟ್ಲರ್ ಮೀರಿಸುವ ಆಡಳಿತವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

ಹುಬ್ಬಳ್ಳಿ: ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾತ್ರದ ಬಗ್ಗೆ ಸಾಕ್ಷಿಯನ್ನು ಹೇಳಿದ ಕಾರಣ ದೇವರಾಜೇಗೌಡನ ಬಂಧನವಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ಹಿಟ್ಲರ್’ನನ್ನು ಮೀರಿಸೋ ಆಡಳಿತವಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ದೇವರಾಜೇಗೌಡನ ಬಂಧನದಲ್ಲಿ ರಾಜಕಾರಣವಿದೆ. ಸ್ವಾರ್ಥ ರಾಜಕಾರಣ, ಪಕ್ಷ ರಾಜಕಾರಣ ಇದರಲ್ಲಿ ಸ್ಪಷ್ಟವಾಗಿದೆ. ಈ ಮೂಲಕ ವಿರೋಧಿಗಳನ್ನು ಮುಗಿಸೋದು ಸ್ಪಷ್ಟವಾಗಿದೆ ಎಂದರು‌.ಇನ್ನು ಕಿಡ್ನಾಪ್ ಪ್ರಕರಣದಲ್ಲಿ ಪ್ರಶ್ನಾರ್ಥಕ ಚಿಹ್ನೆಯಿದೆ. ಯಾಕೆ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಯಾಕೆ ಬಿಟ್ಟಿದ್ದಾರೆ ಎಂಬುದು ಪ್ರಶ್ನೆಯಾಗಿದೆ. ಇದೀಗ ದೇವರಾಜೇಗೌಡ ತಮಗಿರೋ ಮಾಹಿತಿಯನ್ನು ಎಲ್ಲಿ ಹೇಳಬಹುದು ಎಂಬ ಕಾರಣಕ್ಕೆ ಬಂಧನ ಮಾಡಲಾಗಿದೆ ಎಂದರು.ಎಸ್ಐಟಿ ಕಾಂಗ್ರೆಸ್ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಸಭೆ ಇದೆ. ದೇವರಾಜೇಗೌಡ ಬಂಧನ ವಿಚಾರದ ಬಗ್ಗೆ ಮುಂದೆ ಏನ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡತ್ತೇವೆ ಎಂದರು.ಇದೀಗ ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ. ಇದರಲ್ಲಿ ಡಿಕೆಶಿವಕುಮಾರ ಎಲ್ಲಿ ಸಿಕ್ಕಿ ಹಾಕಿಕೊಳ್ಳತ್ತಾರೋ ಎಂಬ ಕಾರಣಕ್ಕೆ ದೇವರಾಜೇಗೌಡರ ಬಂಧನವಾಗಿದೆ. ಯಾರನ್ನೋ ರಕ್ಷಣೆ ಮಾಡೋದು, ಒಂದು ಪಕ್ಷ ಅಥವಾ ಒಂದು ಕುಟುಂಬ ಮುಗಿಸೋ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.ಮೈತ್ರಿ ವಿಚಾರವಾಗಿ ನನಗೆ ಯಾವ ಮಾಹಿತಿಯಿಲ್ಲ, ಸಭೆಯಲ್ಲಿ ತಿರ್ಮಾಣ ಆಗಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *