ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಇನ್ನೂ ನೇಹಾಳ ಕೊಲೆಯ ಬೆನ್ನಲ್ಲೇ ಇಂತಹದೊಂದು ಘಟನೆ ನಡೆದಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ ಎಂದು ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.
Check Also
ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

