ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಹಿರಿಯ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಪೊಲೀಸ್ ಇನ್ಸಪೆಕ್ಟರ್, ಮಹಿಳಾ ಹೆಡ್‌ಕಾನ್ಸಟೇಬಲ್ ಅಮಾನತ್ತು ಮಾಡಲಾಗಿತ್ತು. ಇಂದು ಡಿಸಿಪಿ ಅವರನ್ನ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ ಕೇಳಿ ಬಂದ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಲಾಗಿದೆ.

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಹೇಳಿದ ನಂತರವೂ ಪೊಲೀಸರು ಕ್ರಮ ಜರುಗಿಸಿಲ್ಲವೆಂದು ಆರೋಪ ಕೇಳಿ ಬಂದ ತಕ್ಷಣವೇ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು ಇನ್ಸಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಅವರನ್ನ ಅಮಾನತ್ತು ಮಾಡಿದ್ದರು.ಇದೀಗ ರಾಜ್ಯ ಸರಕಾರ ಡಿಸಿಪಿ ರಾಜೀವ ಅವರನ್ನ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ. ಸೋಜಿಗವೆಂದರೇ ಎಸಿಪಿ ವಿಜಯಕುಮಾರ ತಳವಾರ ಅವರ ನಿರ್ಲಕ್ಷ್ಯವೂ ಇದೇ ಎಂದು ಹೇಳಲಾಗಿತ್ತು. ಅವರ ವಿರುದ್ಧವೂ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news


