ಹುಬ್ಬಳ್ಳಿ ನೇಹಾ ನಿವಾಸಕ್ಕೆ ಎಡಿಜಿಪಿ ಭೇಟಿ ನೀಡಿ ನೇಹಾ ಹಿರೇಮಠ ಅವರ ತಂದೆ ಹಾಗೂ ತಾಯಿ ಜೊತೆ ಮಾತುಕತೆ ನಡೆಸಿದರು.ಬಿಡ್ನಾಳ ಕ್ರಾಸ್ ನ ನೇಹಾ ಹಿರೇಮಠ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ಹು-ಧಾ ಪೊಲೀಸ್ ಕಮಿಷನ್ ರೇಣುಕಾ ಸುಕುಮಾರ್ ಭೇಟಿ ನೀಡಿದರು.ಇದಕ್ಕೂ ಮುನ್ನ ಪೊಲೀಸ್ ಅಧಿಕಾರಿಗಳೊಂದಿಗಿನ ಹು-ಧಾ ಪೊಲೀಸ್ ಕಮೀಷ್ನರ್ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಹು-ಧಾ ಕಮೀಷ್ನರೇಟ್ ವ್ಯಾಪ್ತಿಯಲ್ಲಿ ಹಲವಾರು ಘಟನೆಗಳು ನಡೆದಿವೆ.ಯಾವ ರೀತಿ ನಡೆದಿದೆ, ಏನಾಗಿದೆ ನೋಡಲು ಬಂದಿದ್ವಿ. ಎಲೆಕ್ಷನ್ ಸಹ ಇತ್ತು. ಇದೇ ವೇಳೆ ಇಬ್ಬರು ಮಹಿಳೆಯರ ಹತ್ಯೆಯಾಗಿದೆ.ಇಲಾಖೆ ಬಗ್ಗೆ ಸಾರ್ವಜನಿ ಕರಿಂದ ಅಭಿಪ್ರಾಯಗಳು ಬಂದಿದ್ದವು.ಹೀಗಾಗಿ ನಾನೇ ಬಂದು ಸಭೆ ಮಾಡಿದ್ದೇನೆ. ಸಭೆ ಮಾಡಿ ಸಮಗ್ರ ಮಾಹಿತಿ ಪಡೆದಿರುವೆ. ಆದರೆ ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದರೆ ಕ್ರೈಂ ಅಂಕಿ-ಅಂಶಗಳ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ಅಂಕಿ-ಅಂಶ ನೋಡಿದ್ರೆ ಹಿಂದಿಗಿಂತ ಈ ಸಲ ಕಡಿಮೆ ಇದೆ. ಆದರೆ ಹು-ಧಾ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿದೆ.ಹೀಗಾಗಿ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸೂಚನೆ ಕೊಟ್ಟಿದ್ದೇನೆ.ಅದರನ್ವಯ ಅಪರಾಧ ಪ್ರಕರಣ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.ನನ್ನ ಸೂಚನೆ ಅನ್ವಯ ಏನು ಕೆಲಸ ಮಾಡ್ತಾರೆ ಮುಂದೆ ನೋಡುವಿರಂತೆ ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸುವ ಕೆಲಸ ಪೊಲೀಸರು ಮುಂದೆ ಮಾಡಲಿದ್ದಾರೆ. ಗಾಂಜಾ ಮತ್ತಿತರ ಚಟು ಚಟಿಕೆ ಹೆಚ್ಚಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಗಾಂಜಾ ಪತ್ತೆ ಕೇಸ್ ಸಹ ಹೆಚ್ಚು ದಾಖಲು ಮಾಡಿದ್ದಾರೆ.ಇನ್ನೂ ಹೆಚ್ಚು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.ಅಂಜಲಿ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಅಮಾನತು ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರದ ನಿರ್ಧಾರಗಳನ್ನು ನಾನು ಬಹಿರಂಗವಾಗಿ ಹೇಳಲಾರೆ.ಪೊಲೀಸರ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದವು. ದೂರು ಬಂದಾಗ ಕ್ರಮ ತೆಗೆದುಕೊಳ್ಳ ಬೇಕಾಗುತ್ತದೆ.ಅಂಜಲಿ ಅಜ್ಜಿ ಮೊದಲೇ ದೂರು ಕೊಡಲು ಬಂದಿದ್ದಳೆಂಬ ವಿಚಾರ ಬಂದಿತ್ತು. ಹೀಗಾಗಿ ಸಂಬಂಧಿಸಿದ ಸಿಬ್ಬಂದಿ ಮೇಲೆ ಕ್ರಮ ಆಗಿದೆಅವಳಿ ನಗರದಲ್ಲಿ ಪೊಲೀಸ್ ಠಾಣೆಗಳು ಹೆಚ್ಚಾಗಬೇಕಿದೆ.ಆ ಬಗ್ಗೆಯೂ ಪ್ರಕ್ರಿಯೆ ನಡೆದಿದೆಸಭೆಯ ಸಮಗ್ರವಾದ ವರದಿ ಗೃಹ ಸಚಿವರಿಗೆ ಸಲ್ಲಿಸುತ್ತೇನೆ ಎಂದರು. – ಹಿತೇಂದ್ರ, ಕಾನೂನು ಸುವ್ಯವಸ್ಥೆ ಎಡಿಜಿಪಿ
Check Also
ಅತ್ಯಾಚಾರ ಎಸೆಗಿದವರ ಮೇಲೆ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

