Warning: Undefined array key "wpdb" in /home/eamphica/public_html/wp-content/mu-plugins/lumen-plugin.php on line 5616
ಹುಬ್ಬಳ್ಳಿಯಲ್ಲಿ ಹೊಗೆಯಾಡುತ್ತಿದೆ ಗಾಂಜಾ: ಓರ್ವನ ಬಂಧಿಸಿದ ಕಸಬಾಪೇಟ ಪೊಲೀಸರು… – bigtvnews | Hubli Dharwad News | Kannada News | Karnataka News
Breaking News

ಹುಬ್ಬಳ್ಳಿಯಲ್ಲಿ ಹೊಗೆಯಾಡುತ್ತಿದೆ ಗಾಂಜಾ: ಓರ್ವನ ಬಂಧಿಸಿದ ಕಸಬಾಪೇಟ ಪೊಲೀಸರು…

ಹುಬ್ಬಳ್ಳಿ: ನಿಷೇಧಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧನ ಮಾಡುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಸಬಾಪೇಟ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಹಳೇಹುಬ್ಬಳ್ಳಿಯ ಸದರಸೋಫಾ

ಕೌದಿಮಠದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿ ಓರ್ವ ಗಾಂಜಾ ಪೆಡ್ಲರ್‌ ಜಾವೇದ್ ಹವಾಲ್ದಾರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿತನಿಂದ 42,500/- ರೂ ಮೌಲ್ಯದ 850ಗ್ರಾಂ ಗಾಂಜಾ, 200/- ರೂ ನಗದು ವಶಪಡಿಸಿಕೊಂಡಿದ್ದು, NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು, ಆರೋಪಿಗಳನ್ನು ನ್ಯಾಯಾಲ ಬಂಧನಕ್ಕೆ ಒಪ್ಪಿಸಿದ್ದಾರೆ.ಈ ಕಾರ್ಯಾಚರಣೆಯಲ್ಲಿ

ಕಸಬಾಪೇಟ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಇವರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದು ಇವರುಗಳ ಕಾರ್ಯಕ್ಕೆ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *