Breaking News
Featured Video Play Icon

ರೀಲ್ಸ್ ಮಾಡಲು ಹೋಗಿ ಸಸ್ಪೆಂಡ್ ಆದ ಚಾಲಕ, ನಿರ್ವಾಹಕಿ: ಸಾರಿಗೆ ಸಂಸ್ಥೆ ಎಂಡಿ ಮಾಹಿತಿ..!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ ಚಾಲಕನೊಬ್ಬ ಮಳೆ ಬರುವ ವೇಳೆ ಬಸ್ ಸೋರುತ್ತಿದೆ ಎಂದು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ವೀಡಿಯೋ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ಶಿಸ್ತು ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ಧಾರವಾಡ ತಾಲೂಕಿನಲ್ಲಿ ಕೆಲವೆಡೆ ಮಳೆಯಾಗಿದೆ. ಈ ಸಂದರ್ಭದಲ್ಲಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ ಧಾರವಾಡಕ್ಕೆ ಬಸ್ಸು ಬರುತ್ತಿದ್ದ ವೇಳೆ ಮಳೆ ಬಂದಿದೆ. ಈ ವೇಳೆ ಚಾಲಕ ಒಂದು ಕೈಯಲ್ಲಿ ಛತ್ರಿ ಹಿಡಿದು ಬಸ್ ಚಾಲನೆ ಮಾಡುತ್ತಿರುವುದನ್ನು ಬಸ್ ನಿರ್ವಾಹಕಿ ತಮ್ಮ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸಿದ್ದು, ಯಾವುದೇ ರೀತಿಯಲ್ಲಿ ಮೇಲ್ಚಾವಣಿ ಸೋರದೇ ಇರುವ ಹಿನ್ನೆಲೆಯಲ್ಲಿ ಹಾಗೂ ಸಿಬ್ಬಂದಿ ಮನರಂಜನೆಗಾಗಿ ವಿಡಿಯೋ ಮಾಡಿದ್ದ ಬಗ್ಗೆ ಒಪ್ಪಿಕೊಂಡಿದ್ದಾರೆ. ಶಿಸ್ತು ಕ್ರಮ ಜರುಗಿಸುವ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದರು.ಇನ್ನೂ ಸಾರಿಗೆ ಸಂಸ್ಥೆಯ ತಾಂತ್ರಿಕ ಸಿಬ್ಬಂದಿ ನೇತೃತ್ವದಲ್ಲಿ ತನಿಖೆ ನಡೆಸಿದ್ದು, ಯಾವುದೇ ರೀತಿಯಲ್ಲಿ ಬಸ್ಸಿನ ಮೇಲ್ಚಾವಣಿಯಲ್ಲಿ ಸೋರಿಕೆ ಕಂಡು ಬಂದಿಲ್ಲ. ಮನರಂಜನೆಗಾಗಿ ವಿಡಿಯೋ ಮಾಡಿರುವ ನಿಟ್ಟಿನಲ್ಲಿ ಸಸ್ಪೆಂಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *