Breaking News
Featured Video Play Icon

ವಿಶ್ವ ಪರಿಸರ ದಿನಾಚರಣೆ: ವಿದ್ಯುಕ್ತ ಚಾಲನೆ ನೀಡಿದ ನ್ಯಾಯಾಧೀಶರು..!

ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುಬ್ಬಳ್ಳಿ, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ, ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೊಸ ಕೋರ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು…ಕಾರ್ಯಕ್ರಮವನ್ನು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಎಮ್.ಎಸ್.ಬಾಣದ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿಗಳಾದ ಆರ್.ಎಸ್.ಉಪ್ಪಾರ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಪ್ರಭುಲಿಂಗ ಗಡ್ಡದ ಹಾಗೂ ಹುಬ್ಬಳ್ಳಿ ನ್ಯಾಯಾಲಯದ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರುಗಳು ಪಾಲ್ಗೊಂಡಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *